ಬೆಂಗಳೂರು: ಯೋಗಾಭ್ಯಾಸದಿಂದ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಆಯುಷ್ ಮಂತ್ರಾಲಯ ಭಾರತ ಸರ್ಕಾರ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸಹಯೋಗದಲ್ಲಿ ನಡೆದ ಏಳನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಟ್ವೀಟ್ ಮೂಲಕವೂ ಶುಭಾಶಯ ತಿಳಿಸಿರುವ ಅವರು, ಜೀವನದ ಸಮನ್ವಯತೆಯನ್ನು ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವದ್ದು. ಯೋಗಾಭ್ಯಾಸದಿಂದ ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣವೂ ಸಾಧ್ಯ. ಯೋಗ, ವ್ಯಾಯಾಮಗಳು ನಮ್ಮ ಜೀವನ ಕ್ರಮವಾಗಿರಲಿ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ.#YogaDay2021#YogaForAll pic.twitter.com/D0ifXaxOUS
— B.S.Yediyurappa (@BSYBJP) June 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.