ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತಂದ ಬಳಿಕ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದ್ದು, ಇಂದಿನಿಂದ ತೊಡಗಿದಂತೆ 16 ಜಿಲ್ಲೆಗಳಲ್ಲಿ ಅನ್ಲಾಕ್ 2 ಜಾರಿಗೊಳಿಸಿ ಸರ್ಕಾರ ಆದೇಶಿಸಿತ್ತು.
ಇದೀಗ ಈ 16 ಜಿಲ್ಲೆಗಳ ಜೊತೆಗೆ ಮತ್ತೆ 6 ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ಲಾಕ್ ಆದ ಜಿಲ್ಲೆಗಳ ಸಾಲಿಗೆ ಕೊರೋನಾ ಪಾಸಿಟಿವಿಟಿ ದರ ಕಡಿಮೆ ಇರುವ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ 50% ಸಾಮರ್ಥ್ಯದ ಜೊತೆಗೆ ಬಸ್, ಮೆಟ್ರೋ, ಹೊಟೇಲ್, ಕ್ಲಬ್, ಹೊರಾಂಗಣ ಚಿತ್ರೀಕರಣ, ಹೊರಾಂಗಣ ಕ್ರೀಡಾಂಗಣ, ಲಾಡ್ಜ್, ರೆಸಾರ್ಟ್, ಜಿಮ್ಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ಒದಗಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.