ನವದೆಹಲಿ: ಕಳೆದ 24 ಗಂಟೆಗಳಲ್ಲಿ 47 ಲಕ್ಷಕ್ಕೂ ಹೆಚ್ಚು ಕೋವಿಡ್ -19 ಲಸಿಕೆ ಡೋಸ್ ಅನ್ನು ದೇಶದಲ್ಲಿ ನೀಡಲಾಗಿದ್ದು, ಇದುವರೆಗಿನ ಗರಿಷ್ಠ ಏಕದಿನ ದಾಖಲೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ಒಟ್ಟು 47,51,080 ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದಿನಿಂದ ಕೇಂದ್ರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆಗಳನ್ನು ನೀಡಲು ಪ್ರಾರಂಭಿಸಿದ್ದು, ರಾಜ್ಯಗಳ ಲಸಿಕೆ ಕಾರ್ಯಕ್ರಮದ ಜವಾಬ್ದಾರಿಯನ್ನು ಹಿಂದಕ್ಕೆ ತೆಗೆದುಕೊಂಡಿದೆ.
ಕೇಂದ್ರವು ಕಂಪೆನಿಗಳು ಉತ್ಪಾದಿಸುವ ಶೇ .75 ರಷ್ಟು ಲಸಿಕೆಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ. ಖಾಸಗಿ ಆಸ್ಪತ್ರೆಗಳು ಉಳಿದ 25 ಶೇಕಡಾವನ್ನು ಖರೀದಿಸುವುದನ್ನು ಮುಂದುವರೆಸುತ್ತವೆ. ಹಣ ಪಾವತಿಸಿ ಲಸಿಕೆ ಪಡೆಯಲು ಸಿದ್ಧರಿರುವವರು ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಳ್ಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.