ಬೆಂಗಳೂರು: ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು 500 ಕೋಟಿ ರೂ. ಗಳಿಂದ 2,500 ಕೋಟಿ ರೂ. ಗಳಿಗೆ ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ಹೆಚ್ಚಳ ಮಾಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದಿನ ದಿನಗಳ ಅಗತ್ಯತೆಯನ್ನು ಮನಗಂಡು ಈ ಮೊತ್ತವನ್ನು 500 ಕೋಟಿ ಯಿಂದ 2500 ಕೋಟಿ ರೂ. ಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಬಾರಿ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಈ ನಿಧಿಯನ್ನು 80 ಕೋಟಿ ರೂ. ಗಳಿಂದ 500 ಕೋಟಿ ರೂ. ಗಳಿಗೆ ಏರಿಕೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.