ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 42,640 ಹೊಸ ಕೋವಿಡ್ -19 ಸೋಂಕುಗಳನ್ನು ದಾಖಲಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಬೆಳಿಗ್ಗೆ ತಿಳಿಸಿದೆ.
90 ದಿನಗಳ ನಂತರ ಒಂದು ದಿನದಲ್ಲಿ ದೇಶವು 50,000 ಕ್ಕಿಂತ ಕಡಿಮೆ ಕೊರೊನಾವೈರಸ್ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಇದರೊಂದಿಗೆ ಸಕ್ರಿಯ ಪ್ರಕರಣ 6.62 ಲಕ್ಷಕ್ಕೆ ಇಳಿದಿದೆ.
ಆರೋಗ್ಯ ಸಚಿವಾಲಯವು, ರಾಷ್ಟ್ರೀಯ ಸಾಪ್ತಾಹಿಕ ಪಾಸಿಟಿವಿಟಿ ದರವು ಪ್ರಸ್ತುತ 3.21% ಮತ್ತು ದೈನಂದಿನ ಪಾಸಿಟಿವಿಟಿ ದರವು 2.56% ರಷ್ಟಿದೆ ಎಂದು ಹೇಳಿದೆ.
ಕಳೆದ 24 ಗಂಟೆಗಳಲ್ಲಿ ದೇಶವು 1,167 ಸಾವುಗಳು ಮತ್ತು 81,839 ಚೇತರಿಕೆಗಳನ್ನು ಕಂಡಿದೆ.
ಭಾರತದ ಒಟ್ಟು ಕೋವಿಡ್ -19 ಪ್ರಕರಣ ಈಗ 2.99 ಕೋಟಿಗಳಿಗೆ ಏರಿದೆ, ಅದರಲ್ಲಿ 3,89,302 ಮಂದಿ ಸಾವನ್ನಪ್ಪಿದ್ದಾರೆ ಮತ್ತು 2.89 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ.
ಮತ್ತೊಂದೆಡೆ, ಭಾರತವು ಸೋಮವಾರ 86.16 ಲಕ್ಷ ಲಸಿಕೆ ಡೋಸ್ ಅನ್ನು ನೀಡುವ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಏಕದಿನ ದಾಖಲೆ ನಿರ್ಮಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.