ನವದೆಹಲಿ: ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳ ದತ್ತಾಂಶವನ್ನು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಸಲ್ಲಿಸಿದೆ ಎಂಬುದಾಗಿ ಮೂಲಗಳು ವರದಿ ಮಾಡಿವೆ.
ಕೆಲವು ದಿನಗಳ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿ ಕೆ ಪಾಲ್ ಅವರು, ಭಾರತ್ ಬಯೋಟೆಕ್ ಏಳರಿಂದ ಎಂಟು ದಿನಗಳಲ್ಲಿ ದತ್ತಾಂಶವನ್ನಯ ಸಲ್ಲಿಸಲಿದೆ ಎಂದು ಹೇಳಿದ್ದರು. ಡಾ ವಿ ಕೆ ಪಾಲ್ ಅವರು ಸರ್ಕಾರದ ಕೋವಿಡ್ -19 ಕಾರ್ಯಪಡೆಯ ಮುಖ್ಯಸ್ಥರಾಗಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಪುಣೆ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯೊಂದಿಗೆ ನಿಕಟ ಸಮನ್ವಯದಿಂದ ಅಭಿವೃದ್ಧಿಪಡಿಸಲಾಗಿರುವ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಇದೀಗ ದೇಶದ ಜನರಿಗೆ ನೀಡಲಾಗುತ್ತಿರುವ ಮೂರು ಕೋವಿಡ್ -19 ಲಸಿಕೆಗಳಲ್ಲಿ ಒಂದಾಗಿದೆ.
ಡಾ.ಕೃಷ್ಣ ಎಲಾ ನೇತೃತ್ವದ ಕಂಪನಿಯು ಕೋವ್ಯಾಕ್ಸಿನ್ ಲಸಿಕೆಯ ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ವಿಸ್ತರಿಸುವ ಪ್ರಕ್ರಿಯೆಯಲ್ಲಿದೆ.
ಪ್ರಸ್ತುತ ದೇಶದಲ್ಲಿ ಬಳಸಲಾಗುತ್ತಿರುವ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಏಕೈಕ ಲಸಿಕೆ ಕೋವಾಕ್ಸಿನ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.