ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ, ಶಾಲಾ ಸಿಬ್ಬಂದಿಗೆ, ಶಿಕ್ಷಕರಿಗೆ ಲಸಿಕೆ ನೀಡಿ ಆ ಬಳಿಕ ಹಂತ ಹಂತವಾಗಿ ಕಾಲೇಜುಗಳನ್ನು ತೆರೆಯಲು ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ತಜ್ಞರ ಜೊತೆಗೆ ಸಭೆ ನಡೆಸಿದ ಮಾತನಾಡಿದ ಸಿಎಂ, ಕೊರೋನಾ ನಂತರದಲ್ಲಿ ಆರೋಗ್ಯ ಸಮಸ್ಯೆಯ ಕಡೆಗೆ ಹೆಚ್ಚು ಗಮನ ನೀಡಬೇಕಾಗಿದೆ. 18 + ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಆ ಬಳಿಕ ಹಂತ ಹಂತವಾಗಿ ಕಾಲೇಜು ತೆರೆಯಲು ತಜ್ಞರು ಸೂಚಿಸಿದ್ದಾಗಿ ತಿಳಿಸಿದ್ದಾರೆ.
ಸದ್ಯ 18 ವರ್ಷ ಕೆಳಗಿನ ಮಕ್ಕಳಿಗೆ ಲಸಿಕೆ ಇಲ್ಲ, ಪ್ರಯೋಗಿಕ ಹಂತದಲ್ಲಿ ಇದೆ. ಹೀಗಾಗಿ ಶಾಲೆ ಆರಂಭಿಸುವ ಬಗ್ಗೆ ನಂತರ ತೀರ್ಮಾನಿಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಮುನ್ನೆಚ್ಚರಿಕೆಯಾಗಿ ಜಿಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಘಟಕಗಳನ್ನು ಆರಂಭಿಸಲಾಗುತ್ತದೆ. ಮಾನವ ಸಂಪನ್ಮೂಲ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಸ್ವಯಂಸೇವಾ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಸಲಹೆ ನೀಡಲಾಗಿದೆ. ಮಕ್ಕಳ ಮನೋಸ್ಥೈರ್ಯ ಹೆಚ್ಚಳಕ್ಕೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.