ನವದೆಹಲಿ: ಭಾರತದ ಮೊದಲ ಸ್ಥಳೀಯ ಕೋವಿಡ್-19 ಲಸಿಕೆ ಕೊವ್ಯಾಕ್ಸಿನ್ ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಭ್ಯವಾಗಲಿದೆ ಎಂದು ದೆಹಲಿ ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಗುಲೇರಿಯಾ ಅವರು, “ಹಂತ 2/3 ಪ್ರಯೋಗಗಳು ಪೂರ್ಣಗೊಂಡ ನಂತರ ಮಕ್ಕಳಿಗೆ ಕೋವ್ಯಾಕ್ಸಿನ್ ಡೇಟಾ ಸೆಪ್ಟೆಂಬರ್ ವೇಳೆಗೆ ಲಭ್ಯವಿರುತ್ತದೆ ಮತ್ತು ಅದೇ ತಿಂಗಳಲ್ಲಿ ಅನುಮೋದನೆಯನ್ನೂ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ” ಎಂದು ಹೇಳಿದರು.
ಇದಲ್ಲದೆ, ಫೈಝರ್-ಬಯೋಟೆಕ್ ಲಸಿಕೆ ಭಾರತದಲ್ಲಿ ಅನುಮೋದನೆಯನ್ನು ಪಡೆದರೆ ಅದು ಮಕ್ಕಳಿಗೆ ಒಂದು ಆಯ್ಕೆಯಾಗಬಹುದು ಎಂದು ಅವರು ಹೇಳಿದ್ದಾರೆ.
ಜೂನ್ 7 ರಂದು ದೆಹಲಿ ಏಮ್ಸ್ 2 ರಿಂದ 17 ವರ್ಷದೊಳಗಿನ ಮಕ್ಕಳ ಮೇಲೆ ಲಸಿಕೆ ಕ್ಲಿನಿಕಲ್ ಪ್ರಯೋಗಗಳನ್ನು ಪ್ರಾರಂಭಿಸಿದೆ.
ಮೇ ತಿಂಗಳಲ್ಲಿ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಭಾರತ್ ಬಯೋಟೆಕ್ಗೆ ಕೋವ್ಯಾಕ್ಸಿನ್ನ 2-3 ನೇ ಹಂತದ ಪ್ರಯೋಗಗಳನ್ನು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪ್ರಾರಂಭಿಸಲು ಅನುಮತಿ ನೀಡಿತ್ತು.
ಜನಸಂದಣಿಯನ್ನು ತಡೆಯದಿದ್ದರೆ ಮತ್ತು ನಿಯಮಗಳನ್ನು ಉಲ್ಲಂಘಿಸಿದರೆ ಮುಂದಿನ ಆರರಿಂದ ಎಂಟು ವಾರಗಳಲ್ಲಿ ಕೋವಿಡ್-19 ರ ಮೂರನೇ ಅಲೆ ಭಾರತವನ್ನು ಅಪ್ಪಳಿಸಬಹುದು ಎಂದು ಗುಲೇರಿಯಾ ಈ ಹಿಂದೆ ಎಚ್ಚರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.