ನವದೆಹಲಿ: ಲಸಿಕೆ ಅಭಿಯಾನದಲ್ಲಿ ಮತ್ತೊಂದು ಮಹತ್ವದ ಸಾಧನೆಯನ್ನು ಭಾರತ ಮಾಡಿದೆ. ಭಾರತದ ಒಟ್ಟು ವ್ಯಾಕ್ಸಿನೇಷನ್ ವ್ಯಾಪ್ತಿ 30 ಕೋಟಿ ದಾಟಿದೆ.
ನಿನ್ನೆ ಸಂಜೆ 7 ಗಂಟೆಗೆ ನೀಡಲಾದ ತಾತ್ಕಾಲಿಕ ವರದಿಯ ಪ್ರಕಾರ, ಭಾರತವು ಇದುವರೆಗೆ ನೀಡಿದೆ ಒಟ್ಟು ಕೋವಿಡ್ ಲಸಿಕೆ ಡೋಸ್ 30 ಕೋಟಿ 9 ಲಕ್ಷ 69 ಸಾವಿರ 538 ಆಗಿದೆ.
ಕೋವಿಡ್-19 ವ್ಯಾಕ್ಸಿನೇಷನ್ನ ಹೊಸ ಹಂತವು ಜೂನ್ 21 ರಿಂದ ಪ್ರಾರಂಭವಾಗಿದ್ದು, ನಿನ್ನೆ 58.34 ಲಕ್ಷ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನಿನ್ನೆ 18 ರಿಂದ 44 ವರ್ಷ ವಯಸ್ಸಿನವರಲ್ಲಿ 41 ಲಕ್ಷ 23 ಸಾವಿರಕ್ಕೂ ಹೆಚ್ಚು ಜನರಿಗೆ ಮೊದಲ ಡೋಸ್ ಮತ್ತು 68,903 ಲಸಿಕೆ ಪ್ರಮಾಣವನ್ನು ಎರಡನೇ ಡೋಸ್ ಆಗಿ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.