ಬೆಂಗಳೂರು: ಮುಂದಿನ ಹಂತದ ಅನ್ಲಾಕ್ ಸಂದರ್ಭದಲ್ಲಿ ಮುಜರಾಯಿ ವ್ಯಾಪ್ತಿಯ ದೇಗುಲಗಳನ್ನು ತೆರೆಯುವ ಸಂಬಂಧ ಸಿದ್ಧತೆಗಳು ಆರಂಭವಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿಕ್ರಿಯೆ ನೀಡಿದ್ದು, ಈ ಸಂಬಂಧ ಸರ್ಕಾರ ಚಿಂತನೆ ನಡೆಸುತ್ತಿದೆ. ದೇಗುಲಗಳು ಬಾಗಿಲು ತೆರೆದಲ್ಲಿ ಎಷ್ಟು ಮಂದಿ ಆಗಮಿಸಬಹುದು. ಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಬಾಗಿಲು ತೆರೆಯುವುದು ಸಾಧ್ಯವೇ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿರುವುದಾಗಿಯೂ ಹೇಳಿದ್ದಾರೆ. ಈ ಕುರಿತು ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ.
ಈ ಮಾರ್ಗಸೂಚಿಯನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಜೊತೆಗೆ ದೇಗುಲಗಳನ್ನು ತೆರೆಯಲು ಮುಖ್ಯಮಂತ್ರಿಗಳ ಅನುಮೋದನೆ ಸಹ ಪಡೆಯಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಸಪ್ತಪದಿ ಕಾರ್ಯಕ್ರಮವನ್ನು ಸಹ ಮತ್ತೆ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.