ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆ ಶಂಕುಸ್ಥಾಪನೆಯಾಗಲಿದ್ದು, ಇದನ್ನು ಕಾಂಗ್ರೆಸ್ನವರು ಬಂದು ನೋಡಿಕೊಂಡು ಹೋಗಲಿ, ಟೀಕೆ ಮಾಡುವುದು ನಿಲ್ಲಿಸಲಿ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅವರಿಂದು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಸಂಚರಿಸಿ, ಬೆಂಗಳೂರು ಉಪನಗರ ರೈಲು ಯೋಜನೆ ಮತ್ತು ರೈಲು ಮಾರ್ಗ ಡಬಲಿಂಗ್ ಯೋಜನೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು.
ಇದು ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯಾಗಿದ್ದು, ಅವರಿಂದಲೇ ಯೋಜನೆಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಯೋಜನೆಯು ಶೀಘ್ರ ಸಂಪೂರ್ಣಗೊಳ್ಳಲು ಪ್ರಧಾನಿ ಮೋದಿ ಅವರೂ ಸಂಪೂರ್ಣ ಒತ್ತು ನೀಡುತ್ತಿದ್ದಾರೆ. ಈ ಯೋಜನೆ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಕಾಂಗ್ರೆಸ್ ಟೀಕಿಸುವುದನ್ನು ನಿಲ್ಲಿಸಲಿ ಎಂದು ಹೇಳಿದ್ದಾರೆ. ಈ ಯೋಜನೆಯಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ಜೊತೆಗೆ, ಹೊರವಲಯದ ಉಪನಗರ ಸಾರಿಗೆ ಸಂಪರ್ಕ ಸುಲಭವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.