ಬೆಂಗಳೂರು: ರಾಜ್ಯದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಈ ಪಟ್ಟಿಯನ್ನು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಪ್ರಾರಂಭಕ್ಕೂ ಮೊದಲೇ ಲಸಿಕೆ ದೊರೆಯುವಂತೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಈ ಬಾರಿಯ ಪರೀಕ್ಷೆಯಲ್ಲಿ ಕೊರೋನಾ ನಿಯಂತ್ರಣ ದೃಷ್ಟಿಯಿಂದ ಅಃತರ ಕಾಪಾಡಿಕೊಳ್ಳಲು ಆರು ಸಾವಿರಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಹೀಗಾಗಿ ಹೆಚ್ಚಿನ ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅವರೆಲ್ಲರಿಗೂ ಲಸಿಕೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ಕರ್ತವ್ಯಗಳಲ್ಲಿ ತೊಡಗಿಸಿಕಂಡಿರುವ ಶಿಕ್ಷಕರನ್ನು ಆ ಕರ್ತವ್ಯದಿಂದ ಬಿಡುಗಡೆ ಮಾಡುವಂತೆಯೂ ಸುರೇಶ್ ಕುಮಾರ್ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.