ಬೆಂಗಳೂರು: ರಾಜ್ಯದಲ್ಲಿ 2025 ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆಗನುಸಾರವಾಗಿ ಜಾರಿಗೊಳಿಸುವ ಉದ್ದೇಶದಿಂದ ಜುಲೈ 15 ರ ಮೊದಲು ಕಾರ್ಯ ಯೋಜನೆಯ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಸಂಕಷ್ಟದ ಕಾರಣದಿಂದ ಆರ್ಥಿಕ ಅವಕಾಶಗಳು, ಉದ್ಯೋಗ ಸರಪಳಿಯ ಮೇಲೆ ಮಾರಕ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಈ ವಲಯವನ್ನು ಚೇತರಿಸಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ‘ಮಿಷನ್ ಯುವ ಸಮೃದ್ಧಿ’ ಹೆಸರಿನಡಿ ಯೋಜನೆ ರೂಪಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ದಕ್ಷಿಣ ಕನ್ನಡ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಯಚೂರು, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.