ನವದೆಹಲಿ: ತುರ್ತು ಪರಿಸ್ಥಿತಿ ಹೇರಿದ ಕರಾಳ ದಿನದ 46 ನೇ ವರ್ಷವನ್ನು ಇಂದು ನೆನಪು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆ “ಕರಾಳ ದಿನ” ಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಮತ್ತು ಭಾರತದ ಪ್ರಜಾಪ್ರಭುತ್ವ ಮನೋಭಾವವನ್ನು ಬಲಪಡಿಸಲು ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕುವ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
“ನಮ್ಮ ಪ್ರಜಾಪ್ರಭುತ್ವದ ಧ್ಯೇಯಗಳನ್ನು ಕಾಂಗ್ರೆಸ್ ಹತ್ತಿಕ್ಕಿದ ಪರಿಯಿದು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಆಗಿನ ಕಾಂಗ್ರೆಸ್ ಸರ್ಕಾರ ಕೈಗೊಂಡ ಹಲವಾರು ಕಠಿಣ ಕ್ರಮಗಳ ಬಗೆಗಿನ ಲಿಂಕ್ ಹಂಚಿಕೊಂಡಿದ್ದಾರೆ.
“ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. 1975 ರಿಂದ 1977 ರವರೆಗಿನ ಅವಧಿಯು ಸಂಸ್ಥೆಗಳ ವ್ಯವಸ್ಥಿತ ನಾಶಕ್ಕೆ ಸಾಕ್ಷಿಯಾಯಿತು. ಭಾರತದ ಪ್ರಜಾಪ್ರಭುತ್ವ ಮನೋಭಾವವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ ನಾವು ಪ್ರತಿಜ್ಞೆ ಮಾಡೋಣ” ಎಂದಿದ್ದಾರೆ.
The #DarkDaysOfEmergency can never be forgotten. The period from 1975 to 1977 witnessed a systematic destruction of institutions.
Let us pledge to do everything possible to strengthen India’s democratic spirit, and live up to the values enshrined in our Constitution.
— Narendra Modi (@narendramodi) June 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.