ಶಿವಮೊಗ್ಗ: ರಾಜ್ಯದಲ್ಲಿ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಆಡಳಿತದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ವಿರೋಧ ಮಾಡುವ ದೃಷ್ಟಿಯಿಂದ ಕಾಂಗ್ರೆಸ್, ಜೆಡಿಎಸ್ ವಿರೋಧ ಹೇಳಿಕೆಗಳನ್ನು ನೀಡುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ಎರಡನೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅದರ ನಿಯಂತ್ರಣಕ್ಕೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಕಳೆದ ಎರಡು ದಿನಗಳ ಹಿಂದೆ ರಾಜ್ಯ 11 ಲಕ್ಷ ಲಸಿಕೆಯನ್ನು ನೀಡುವ ಮೂಲಕ ಸಾಧನೆ ಮೆರೆದಿದೆ. ವಿರೋಧಿಸುವ ಭರದಲ್ಲಿ ಸುಮ್ಮನೆ ಟೀಕಿಸುವುದಲ್ಲ. ಉತ್ತಮ ಕೆಲಸಗಳನ್ನು ಸ್ವೀಕರಿಸುವ ಗುಣವೂ ಬೇಕು. ಅವರ ಟೀಕೆಯನ್ನು ಸಲಹೆ ಎಂದು ಸ್ವೀಕರಿಸಿ ರಾಜ್ಯ ಸರ್ಕಾರ ಮತ್ತಷ್ಟು ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.