ನವದೆಹಲಿ: ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಶುಕ್ರವಾರ ಕೋವಿಡ್-19 ಗಾಗಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (RAT) ಕಿಟ್ ಅನ್ನು ಬಿಡುಗಡೆ ಮಾಡಿದರು. ಇದು ಮೊದಲ ಸಂಪೂರ್ಣ ದೇಶೀಯ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಆಗಿದೆ ಮತ್ತು ಇದನ್ನು ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಅಭಿವೃದ್ಧಿಪಡಿಸಿದೆ.
ಹೆಚ್ಚುವರಿಯಾಗಿ, ಈ ಕಿಟ್ ದರ ಕೈಗೆಟುಕುವಂತದ್ದು, ಕೇವಲ 50 ರೂಪಾಯಿಗೆ ಲಭ್ಯವಿರಲಿದೆ. ಐಐಟಿ ದೆಹಲಿಯ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಐದು ನಿಮಿಷಗಳಲ್ಲಿ ಫಲಿತಾಂಶಗಳನ್ನು ನೀಡುತ್ತದೆ.
“ಈ ತಂತ್ರಜ್ಞಾನವು ದೇಶದಲ್ಲಿ ಕೋವಿಡ್ ಪರೀಕ್ಷಾ ಲಭ್ಯತೆಯಲ್ಲಿ ಕ್ರಾಂತಿಯನ್ನುಂಟು ಮಾಡುತ್ತದೆ ಎಂದು ನನಗೆ ವಿಶ್ವಾಸವಿದೆ. ಐಐಟಿ-ದೆಹಲಿಯ ಆಂತರಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಕಿಟ್ ಅನ್ನು ಸಂಪೂರ್ಣವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ನನಗೆ ಖುಷಿಯಾಗಿದೆ” ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸಂಜಯ್ ಧೋತ್ರೆ ಹೇಳಿದ್ದಾರೆ.
ಈ ಕಿಟ್ನ ತಂತ್ರಜ್ಞಾನವನ್ನು ಸೆಂಟರ್ ಫಾರ್ ಬಯೋಮೆಡಿಕಲ್ ಎಂಜಿನಿಯರಿಂಗ್ನ ಪ್ರೊಫೆಸರ್ ಹರ್ಪಾಲ್ ಸಿಂಗ್ ಮತ್ತು ಅವರ ತಂಡ ಅಭಿವೃದ್ಧಿಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.