ನವದೆಹಲಿ: ಕೇಂದ್ರವು ತನ್ನ ಎಮರ್ಜೆನ್ಸಿ ಕ್ರೆಡಿಟ್-ಲಿಂಕ್ಡ್ ಗ್ಯಾರಂಟಿ ಸ್ಕೀಮ್ (ಇಸಿಎಲ್ಜಿಎಸ್) ಯೋಜನೆಯ ಗಾತ್ರವನ್ನು ಪ್ರಸ್ತುತ ಇರುವ ರೂ 3 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿ ರೂ.ಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಾಂಕ್ರಾಮಿಕ ರೋಗದಿಂದ ಆರ್ಥಿಕತೆಯ ಮೇಲೆ ಉಂಟಾಗುತ್ತಿರುವ ಪರಿಣಾಮವನ್ನು ತಗ್ಗಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ಈ ಯೋಜನೆಯಡಿ ಇದುವರೆಗೆ ಮಂಜೂರಾದ ಸಾಲಗಳು ಮೂಲ ಗುರಿಯ 3 ಲಕ್ಷ ಕೋಟಿ ರೂ.ಗಳ ನಿರೀಕ್ಷೆಗಿಂತ ವೇಗವಾಗಿ ಬೆಳೆದಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಆಸ್ಪತ್ರೆಗಳನ್ನೂ ಸೇರಿಸಲು ಸರ್ಕಾರವು ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುವ ಸಾಧ್ಯತೆಯಿದೆ, ದೇಶದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಇದರಿಂದ ಸಾಧ್ಯವಾಗಲಿದೆ. ಈ ಯೋಜನೆಯನ್ನು ಬ್ರೌನ್ಫೀಲ್ಡ್ ಮತ್ತು ಗ್ರೀನ್ಫೀಲ್ಡ್ ಆಸ್ಪತ್ರೆಗಳಿಗೆ ಕೂಡ ತೆರೆಯಲಾಗುವುದು ಎಂದು ಹೇಳಲಾಗಿದೆ.
ಈ ಯೋಜನೆಯಡಿ ಆಸ್ಪತ್ರೆಗಳಿಗೆ ಗರಿಷ್ಠ 100 ಕೋಟಿ ರೂ.ಗಳ ಸಾಲ ಪಡೆಯಲು ಅವಕಾಶ ನೀಡಲಾಗುತ್ತದೆ. ರಾಷ್ಟ್ರೀಯ ಕ್ರೆಡಿಟ್ ಗ್ಯಾರಂಟಿ ಟ್ರಸ್ಟೀ ಕಂಪನಿಯು ಹೊಸ ಆಸ್ಪತ್ರೆಯನ್ನು ಸ್ಥಾಪಿಸುವ ಸಂದರ್ಭಗಳಲ್ಲಿ ಶೇಕಡಾ 75 ರಷ್ಟು ಹಣವನ್ನು ಖಾತರಿಪಡಿಸುತ್ತದೆ. ಈ ನಡುವೆ, ಸ್ಕೇಲ್-ಅಪ್ ಅಗತ್ಯವಿರುವ ಅಸ್ತಿತ್ವದಲ್ಲಿರುವ ಆಸ್ಪತ್ರೆಗಳಿಗೆ ಗ್ಯಾರಂಟಿ ಶೇಕಡಾ 50 ಆಗಿರುತ್ತದೆ.
ಆರಂಭದಲ್ಲಿ, ಈ ಯೋಜನೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸೀಮಿತವಾಗಿತ್ತು. ನಂತರ ಇದನ್ನು ಇತರ ಕ್ಷೇತ್ರಗಳಿಗೂ ವಿಸ್ತರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.