ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 31 ರೊಳಗಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್ಇ ಪಠ್ಯಕ್ರಮದ ಶಾಲೆಗಳ 12 ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 31 ರ ಮೊದಲು ಫಲಿತಾಂಶ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ರಾಜ್ಯದಲ್ಲಿಯೂ ಅಷ್ಟರೊಳಗಾಗಿ ಫಲಿತಾಂಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಲಾಗಿದೆ. ಈ ಸಂಬಂಧ ವೇಳಾಪಟ್ಟಿ ಸಹ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕಾರ್ಯಪಡೆಯ ಅಧಿಕಾರಿಗಳಿಗೂ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.