ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಲವಾರು ಸವಾಲುಗಳು, ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ, ಕೊರೋನಾ ಸಂಕಷ್ಟಗಳನ್ನು, ಉಪಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಿದೆ. ಹಾಗೆಯೇ ಮುಂದೆ ಬರಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಸಹ ಸಮರ್ಥವಾಗಿ ಎದುರಿಸಲು ನಾವು ಸಿದ್ಧವಾಗಬೇಕು ಎಂದು ಅವರು ಹೇಳಿದ್ದಾರೆ.
ಕೊರೋನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಆದರೂ ಸರ್ಕಾರ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ, ಕೊರೋನಾದಿಂದ ಮೃತಪಟ್ಟವರ ಬಡ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ, ಕೊರೋನಾದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಬಾಲಸೇವೆ ಸೇರಿದಂತೆ ಇನ್ನೂ ಹಲವು ಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಕೊರೋನಾ ಸಂಕಷ್ಟವನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಕೊರೋನಾ ನಿಯಂತ್ರಣಕ್ಕೆ ಜಾರಿಗೊಳಿಸಲಾದ ಲಾಕ್ಡೌನ್ ಕ್ರಮವನ್ನು ಹಂತ ಹಂತವಾಗಿ ಅನ್ಲಾಕ್ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲಾಗಿದೆ. ಹಾಗೆಯೇ ರಾಜ್ಯದಲ್ಲಿ ಲಸಿಕಾ ಅಭಿಯಾನ ಸಹ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಶ್ರೀ @nalinkateel ಮತ್ತು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿಗಳೂ ಆಗಿರುವ ಶ್ರೀ @ArunSinghbjp ರವರ ವರ್ಚುವಲ್ ಸಮಕ್ಷಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಇಂದು ಉದ್ಘಾಟಿಸಲಾಯಿತು. ಸಭೆಯಲ್ಲಿ ಹಿರಿಯ ನಾಯಕರುಗಳು, ಪದಾಧಿಕಾರಿಗಳು ಭಾಗವಹಿಸಿದ್ದಾರೆ.@BJP4Karnataka pic.twitter.com/pOo1FmKWSM
— B.S.Yediyurappa (@BSYBJP) June 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.