ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮತ್ತೊಂದು ಕಡೆಯಲ್ಲಿ ರೂಪಾಂತರ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕಾರಣದಿಂದ ನೆರೆಯ ರಾಜ್ಯ ಮಹಾರಾಷ್ಟ್ರದಿಂದ ರಾಜ್ಯಕ್ಕಾಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯಕ್ಕೆ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದೆ. ಒಂದು ವೇಳೆ ಈ ಪ್ರಮಾಣಪತ್ರ ಇಲ್ಲವಾದರೆ, 2 ಡೋಸ್ ಲಸಿಕೆಗಳನ್ನು ಪಡೆದುಕೊಂಡ ಪ್ರಮಾಣ ಪತ್ರವನ್ನು ತರುವಂತೆ ಸೂಚಿಸಲಾಗಿದೆ.
ಎರಡನೇ ಡೋಸ್ ಲಸಿಕೆ ಪಡೆದವರಲ್ಲಿಯೂ ಸೋಂಕಿನ ಲಕ್ಷಣಗಳು ಕಂಡುಬಂದರೆ, ಅವರಿಗೆ ರ್ಯಾಂಡಮ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ. ಈ ವರದಿಯಲ್ಲಿ ನೆಗೆಟಿವ್ ಬಂದರೆ ಸ್ಯಾಂಪಲ್ ಅನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವ್ಯಕ್ತಿ ರಾಜ್ಯಕ್ಕೆ ಪ್ರವೇಶಿಸುವುದಕ್ಕೂ ಮೊದಲು ಅವರ ವಿಳಾಸ, ದೂರವಾಣಿ ಸಂಖ್ಯೆ, ಇನ್ನಿತರ ಮಾಹಿತಿಗಳನ್ನು ದಾಖಲಿಸಿಟ್ಟುಕೊಳ್ಳಲಾಗುತ್ತದೆ. ಆರ್ಟಿಪಿಸಿಆರ್ ವರದಿಯ ವರೆಗೂ ಹೋಂ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗುತ್ತದೆ. ಪರೀಕ್ಷಾ ವರದಿ ಪಾಸಿಟಿವ್ ಬಂದಲ್ಲಿ ಅವರನ್ನು ಟ್ರಯಾಜಿಂಗ್ ಕೇಂದ್ರಕ್ಕೆ ಕಳುಹಿಸಲಾಗುತ್ತದೆ.
ಗಡಿ ಭಾಗಗಳಲ್ಲಿ ಕೋವಿಡ್ ಟೆಸ್ಟಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಹಾಗೆಯೇ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವವರಿಗೂ ಇದೇ ನೀತಿ ಅನ್ವಯವಾಗಲಿದೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.