ನವದೆಹಲಿ: ಉತ್ತರಾಖಂಡ ಅರ್ಚಕರೊಬ್ಬರ ತಲೆ ಕಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದ ಮದರಸದ ಶಿಕ್ಷಕನೊಬ್ಬನನ್ನು ಬರೇಲಿ ಪೊಲೀಸರು ಬಂಧಿಸಿದ್ದಾರೆ.
ಈತ ಅರ್ಚಕರನ್ನು ಕೊಲೆ ಮಾಡುವಂತೆ ಕರೆ ನೀಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಟಿವಿ ಚಾನೆಲ್ವೊಂದಕ್ಕೆ ಸಂದರ್ಶನ ನೀಡುತ್ತಿದ್ದ ವೇಳೆ ಈತ ಕರೆ ನೀಡಿದ್ದಾನೆ ಎಂದು ಹೇಳಲಾಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಬರೇಲಿಯ ಇಝತ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊನ್ನೆ ಶನಿವಾರ ಈತನನ್ನು ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗುಂಪುಗಳನಡುವೆ ದ್ವೇಷ ಹರಡಲು ಪ್ರಯತ್ನ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ತನ್ನ ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲ ತಾಣಗಳಲ್ಲಿ ಹೇಳಿಕೆ ನೀಡಿರುವ ಮದರಸ ಶಿಕ್ಷಕ, ಕೊಲೆಗೆ ಕರೆ ನೀಡುವ ಸಂದರ್ಭದಲ್ಲಿ ತನ್ನ ಮಾನಸಿಕ ಸ್ಥಿತಿ ಹದಗೆಟ್ಟಿತ್ತು ಎಂದು ಹೇಳಿದ್ದಾನೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.