ಬೆಂಗಳೂರು: ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತನಾಡಿಲ್ಲ. ನಮಗೆ ಮಕ್ಕಳ ಆರೋಗ್ಯ , ಜೀವ ಮುಖ್ಯ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ 24,37,732 ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡುತ್ತಿದ್ದಾರೆ. ಇಂದಿನಿಂದ ಅವರಿಗೆ ಲಸಿಕೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಹಾಗೆಯೇ 10 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಲಸಿಕೆಯ ಪ್ರಮಾಣ ಕಡಿಮೆ ಇದೆ. ಎರಡು ದಿನಗಳಲ್ಲೇ ನವದೆಹಲಿಗೆ ಭೇಟಿ ನೀಡಿ ಈ ಸಂಬಂಧ ಮಾತುಕತೆ ನಡೆಸಿ, ಲಸಿಕೆಯ ಪೂರೈಕೆ ಹೆಚ್ಚಿಸುವಂತೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ. ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಶಾಲೆ ಆರಂಭ ವಿಚಾರದಲ್ಲಿ ಅವಸರ ಬೇಡ. ನೆರೆಯ ರಾಜ್ಯಗಳಲ್ಲಿ ರೂಪಾಂತರ ವೈರಸ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡುವಂತೆ ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.