ಬೆಂಗಳೂರು: ಕಾಸರಗೋಡು, ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳಿಂದ ಗುರುತಿಸಲ್ಪಡುವ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಹೊರಟ ಕೇರಳ ಸರ್ಕಾರದ ನಡೆಯನ್ನು ಸ್ಥಗಿತಗೊಳಿಸುವಂತೆ ಪತ್ರ ಬರೆಯಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಸಿ ಸೋಮಶೇಖರ್ ಅವರು, ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಈ ವಿಚಾರವನ್ನು ಸ್ಥಗಿತಗೊಳಿಸಲು ಕೇರಳದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
ಕಾಸರಗೋಡು- ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳಿಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಕನ್ನಡದ ಸೊಗಡಿನ, ಸಂಸ್ಕೃತಿ ಯನ್ನು ಬಿತ್ತುವ ಹೆಸರುಗಳನ್ನು ಬದಲಾವಣೆ ಮಾಡುವುದು ಸೂಕ್ತವಲು. ಈ ಪ್ರಕರಣವನ್ನು ಸ್ಥಗಿತಗೊಳಿಸಲು ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ. ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇರಳ ಸರ್ಕಾರದ ನಡೆ ಕುರಿತು ಟ್ವೀಟ್ ಮಾಡಿ, ಮಲಯಾಳೀಕರಣಗೊಳಿಸುವ ನಿರ್ಧಾರವನ್ನು ಕೇರಳ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಒಳಗೊಂಡು ಬಹುತೇಕ ಪ್ರದೇಶಗಳ ಹೆಸರನ್ನು ಮಲಯಾಳೀಕರಣಗೊಳಿಸುವ ಕೇರಳ ಸರ್ಕಾರದ ನಿರ್ಧಾರದಿಂದ ಆ ಭಾಗದ ಜನರ ಭಾವನೆಗಳಿಗೆ ಧಕ್ಕೆಯುಂಟಾಗಿದೆ. ಕೇರಳದ ಮುಖ್ಯಮಂತ್ರಿಗಳಾದ ಸನ್ಮಾನ್ಯ @vijayanpinarayi ಅವರ ಈ ತೀರ್ಮಾನವನ್ನು ಮರುಪರಿಶೀಲಿಸಬೇಕು ಮತ್ತು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸುತ್ತೇನೆ.
— Nalinkumar Kateel (@nalinkateel) June 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.