ಲಕ್ನೋ: ಉತ್ತರಪ್ರದೇಶ ಶೀಘ್ರದಲ್ಲೇ ಐದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ದೇಶದ ಏಕೈಕ ರಾಜ್ಯವಾಗಿ ಹೊರಹೊಮ್ಮಲಿದೆ. ಲಕ್ನೋ ಮತ್ತು ವಾರಣಾಸಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ಮಾಣದ ನಂತರ, ರಾಜ್ಯವು ಶೀಘ್ರದಲ್ಲೇ ಕುಶಿನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೊಂದಲಿದ್ದು, ಅದರ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
ನೋಯ್ಡಾದ ಜುವರ್ ಗ್ರೀನ್ ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಶೀಘ್ರದಲ್ಲೇ ಸಿದ್ಧವಾಗಲಿದೆ.
ಉತ್ತರಪ್ರದೇಶ 5 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದ ನಂತರ, ಆ ರಾಜ್ಯದಿಂದ ಅಂತರರಾಷ್ಟ್ರೀಯ ತಾಣಗಳಿಗೆ ವಿಮಾನಗಳ ಹಾರಾಟ ಹೆಚ್ಚಾಗಲಿದ್ದು, ವಿದೇಶಿ ವ್ಯಾಪಾರ ಮತ್ತು ಪ್ರಯಾಣಕ್ಕೆ ಉತ್ತೇಜನ ಸಿಗಲಿದೆ.
ಯಾವುದೇ ರಾಜ್ಯಗಳಿಗೆ ಹೋಲಿಸಿದರೆ ಗರಿಷ್ಠ ಮೆಟ್ರೋ ರೈಲು ಸೇವೆಯನ್ನು ಒದಗಿಸುವ ಮೊದಲ ರಾಜ್ಯ ಉತ್ತರ ಪ್ರದೇಶ. ಮೆಟ್ರೊ ರೈಲು ಈಗಾಗಲೇ ರಾಜ್ಯದಲ್ಲಿ ನೋಯ್ಡಾ, ಗಾಜಿಯಾಬಾದ್, ಗ್ರೇಟರ್ ನೋಯ್ಡಾ ಮತ್ತು ಲಕ್ನೋದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಮುಂಬರುವ ತಿಂಗಳುಗಳಲ್ಲಿ ಆಗ್ರಾ ಮತ್ತು ಕಾನ್ಪುರದಲ್ಲಿ ಮೆಟ್ರೋ ಸೇವೆ ಆರಂಭವಾಗಲಿದೆ. ಅದೇ ಸಮಯದಲ್ಲಿ ದೆಹಲಿಯಿಂದ ಮೀರತ್ಗೆ ರ್ಯಾಪಿಡ್ ರೈಲ್ ಪ್ರಾರಂಭಿಸಲಾಗುತ್ತಿದೆ. ಗೋರಖ್ಪುರ ನಗರದಲ್ಲಿ ಶೀಘ್ರದಲ್ಲೇ ಮೆಟ್ರೋ ಸೇವೆಯೂ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.