ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಸಿಖ್ ಯುವತಿಯರನ್ನು ಅಪಹರಿಸಿ, ಇಸ್ಲಾಂಗೆ ಮತಾಂತರ ಮಾಡಿ ವಯಸ್ಸಾದ ವ್ಯಕ್ತಿಗಳೊಂದಿಗೆ ಮದುವೆ ಮಾಡಿಸಿದ ಘಟನೆಯು ಕಣಿವೆಯಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ. ಸಿಖ್ ಸಂಘಟನೆಗಳು ಘಟನೆಯನ್ನು ಖಂಡಿಸಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ಸಿಖ್ ಗುಂಪುಗಳು ಪ್ರತಿಭಟನೆ ನಡೆಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.
18 ವರ್ಷದ ಓರ್ವ ಯುವತಿಯನ್ನು ಶ್ರೀನಗರದಲ್ಲಿ ವಿಕಲಾಂಗ ವ್ಯಕ್ತಿಗೆ ಮದುವೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ. ಬಳಿಕ ಈಕೆಯನ್ನು ಪೊಲೀಸರು ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ. ಈಕೆ ತಾನು ಇಚ್ಛೆಯಿಂದ ಮದುವೆ ಆಗಿರುವುದಾಗಿ ಹೇಳಿಕೊಂಡಿದ್ದಾಳೆ. ಆದರೆ ಯುವತಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸುವಾಗ ಪೊಲೀಸರು ಆಕೆಯ ಪೋಷಕರನ್ನು ನ್ಯಾಯಾಲಕ್ಕೆ ಪ್ರವೇಶಿಸಲು ಬಿಡಲಿಲ್ಲ ಎಂದು ಸಿಖ್ ಗುಂಪುಗಳು ಆರೋಪಿಸಿವೆ. ಅಲ್ಲದೇ ಯುವತಿಗೆ ಗನ್ ಇಟ್ಟು ಬೆದರಿಸಿ ಮತಾಂತರ ಮಾಡಿ ಮದುವೆ ಮಾಡಿಸಲಾಗಿದೆ ಎಂದು ಆರೋಪಿಸಿವೆ.
ಇನ್ನೊಂದು ಇಂತಹುದೇ ಪ್ರಕರಣ ಕಣಿವೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ, ಆದರೆ ಈ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.