ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ತಗ್ಗುತ್ತಿದೆ. ಇದೇ ಸಂದರ್ಭದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಆತಂಕ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲು ಮಾನವ ಸಂಪನ್ಮೂಲ ಬಳಕೆ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ.
ಕೊರೋನಾ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆಗಳ ಹಂಚಿಕೆ ಮತ್ತು ಸೋಂಕಿತರ ಸಂಪರ್ಕ ಪತ್ತೆ ಕಾರ್ಯವನ್ನು ಸರ್ಕಾರ ಚುರುಕುಗೊಳಿಸಿದ್ದು, ಇದಕ್ಕೆ ಪೂರಕವಾಗಿ ಮಾನವ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬಿಬಿಎಂಪಿ ಸಹ ಆಸಕ್ತಿ ವಹಿಸಿದೆ. ಕೊರೋನಾ, ರೂಪಾಂತರ ವೈರಸ್ಗಳನ್ನು ಸಮರ್ಥವಾಗಿ ನಿಯಂತ್ರಣ ಮಾಡಲು ಮಾನವ ಶಕ್ತಿ ಹೆಚ್ಚು ಉಪಯುಕ್ತವಾಗಿದ್ದು, ಈ ನಿಟ್ಟಿನಲ್ಲಿ ಇಂತಹ ಯೋಜನೆಯತ್ತ ಗಮನ ಹರಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ ರಣದೀಪ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣವಾಗುತ್ತಿದೆ. ಆದರೆ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಕಾಣಿಸಿಕೊಳ್ಳಲು ಆರಂಭಿಸಿದೆ. ಮೂರನೇ ಅಲೆಯ ಭೀತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ಬಿಬಿಎಂಪಿ ಇಂತಹ ನಿಲುವು ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.