ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾಗಲಿರುವುದಾಗಿ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಕ್ಕೆ ನಿರಂತರವಾಗಿ ಲಸಿಕೆ ಪೂರೈಕೆಯಾಗುತ್ತಿದೆ. ಲಸಿಕೆ ಕೊರತೆ ಇಲ್ಲ. ಆದರೆ ದಿನಕ್ಕೆ 10 ಲಕ್ಷ ಡೋಸ್ಗಳಂತೆ ಲಸಿಕೆ ವಿತರಣೆ ಮಾತ್ರ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ವಾರ ನವದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರು , ಇತರ ಸಚಿವರ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದೆ. ಆದರೆ ಕೊರೋನಾ ಮೂರನೇ ಅಲೆಯ ಭೀತಿ ಇದ್ದು ಲಸಿಕೆ ನೀಡಿಕೆಗೆ ವೇಗ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.