ಗುವಾಹಟಿ: ಕೋವಿಡ್-19 ಕಾರಣದಿಂದಾಗಿ ಪತಿಯರನ್ನು ಕಳೆದುಕೊಂಡ ವಿಧವೆಯರಿಗೆ 2.5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಕುಟುಂಬದ ಆದಾಯ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಇದ್ದವರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ.
‘ಮುಖ್ಯಮಂತ್ರಿಯವರ ಕೋವಿಡ್-19 ವಿಧವೆಯರ ಬೆಂಬಲ ಯೋಜನೆ’ ಅಡಿಯಲ್ಲಿ ‘ವಿಧವೆ ಪಿಂಚಣಿ’ ಯೋಜನೆಗಳ ಫಲಾನುಭವಿಗಳು ಸಹ ಈ ಆರ್ಥಿಕ ಸಹಾಯಕ್ಕೆ ಅರ್ಹರಾಗಿದ್ದಾರೆ.
“ಕೋವಿಡ್-19 ಕಾರಣದಿಂದಾಗಿ ಅನೇಕ ಅಮೂಲ್ಯ ಜೀವಗಳು ಕಳೆದುಹೋಗಿವೆ, ಇದರಿಂದಾಗಿ ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಕಾಯಿಲೆಯಿಂದ ಪತಿಯರನ್ನು ಕಳೆದುಕೊಂಡ ಮಹಿಳೆಯರಿಗೆ ಸ್ವಲ್ಪ ಪರಿಹಾರ ನೀಡುವಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ, ಅರ್ಹ ವಿಧವೆಯರಿಗೆ 2.5 ಲಕ್ಷ ರೂಪಾಯಿ ನೀಡಲಾಗುವುದು ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.