ಮೈಸೂರು: ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಿ ವಿದ್ಯಾಭ್ಯಾಸ ಪಡೆಯಲು ಅವಕಾಶ ಸಿಗಬೇಕು ಎಂಬುದು ಹಲವರ ಅಭಿಪ್ರಾಯ. ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಈ ಸಂಬಂಧ ಸುತ್ತೂರು ಮಠದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಕ್ಕಳು ಶಾಲೆಗಳಿಗೆ ಹೋಗಬೇಕಾದ ಸಂದರ್ಭ ಬಂದಾಗ ಎಲ್ಲರ ಸಲಹೆ ಪಡೆಯಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬೇರೆ ಬೇರೆ ಕ್ಷೇತ್ರಗಳ ತಜ್ಞರ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗುವುದು. ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಯಾವ ಕಾಲಕ್ಕೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.
ಶಾಲೆಗಳನ್ನು ತೆರೆಯುವುದಾಗಿ ಸರ್ಕಾರ ಹೇಳಿಲ್ಲ. ಯಾವೆಲ್ಲಾ ದಿಕ್ಕಿನಲ್ಲಿ ಸಾಗಬೇಕು ಎಂಬ ಬಗ್ಗೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಅನ್ಲಾಕ್ ಬಗೆಗೂ ಮಾತನಾಡಿದ ಅವರು, ಜುಲೈ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮುಂದೆ ಏನು ಎಂಬ ಚರ್ಚೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ತಜ್ಞರ ಅಭಿಪ್ರಾಯ ಪಡೆದ ಬಳಿಕ ಸಿಎಂ ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.