ಬೆಂಗಳೂರು: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ನವದೆಹಲಿಗೆ ಮಾವು (250 ಟನ್) ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರೈತರ ಉತ್ಪಾದನೆಗೆ ಉತ್ತಮ ಮೌಲ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕಿಸಾನ್ ರೈಲುಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ರೈಲಿನಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮಾವು ಬೆಳೆಗಾರರಿಗೆ ಲಾಭವಾಗುತ್ತಿದೆ. ಇತರ ಹಣ್ಣು, ತರಕಾರಿಗಳನ್ನು ಬೆಳೆಯುತ್ತಿರುವ ರೈತರು ಸಹ ಈ ರೈಲನ್ನು ಬಳಸಿ ತಮ್ಮ ಉತ್ಪಾದನೆಗೆ ಉತ್ತಮ ಮಾರುಕಟ್ಟೆ ಕಂಡುಕೊಳ್ಳಬಹುದು ಎಂದು ಅವರು ತಿಳಿಸಿದರು.
ಹಾಗೆಯೇ ಕಿಸಾನ್ ರೈಲು ಯೋಜನೆಯಡಿ ರೈತರ ಗುಂಪು, ವರ್ತಕರು, ಲೈಸನ್ಸ್ ಹೊಂದಿರುವ ಕಮಿಷನ್ ಏಜೆಂಟ್, ರಫ್ತುದಾರರು, ಇನ್ನಿತರ ಭಾಗಿದಾರರಿಗೆ ನಿಯಮದಂತೆ ರೈಲು ಸಾಗಾಟ ದರದಲ್ಲಿ 50% ರಿಯಾಯಿತಿ ಸಿಗಲಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.