ಬೆಂಗಳೂರು: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 72 ಗಂಟೆಗಳೊಳಗಿನ ಆರ್ಟಿಪಿಸಿಆರ್ ವರದಿ ಅಥವಾ ಮೊದಲ ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದಿಂದ ಬಸ್ಸು, ರೈಲು, ವಿಮಾನ, ಟ್ಯಾಕ್ಸಿ ಅಥವಾ ಯಾವುದೇ ವೈಯಕ್ತಿಕ ವಾಹನಗಳಲ್ಲಿ ರಾಜ್ಯಕ್ಕೆ ಬರುವವರು ಆರ್ಟಿಪಿಸಿಆರ್ ವರದಿ ಅಥವಾ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಲೇ ಬೇಕು ಎಂದು ಸರ್ಕಾರ ಹೇಳಿದೆ.
ಹಾಗೆಯೇ ವಿಮಾನ ಪ್ರಯಾಣದ ಸಂದರ್ಭದಲ್ಲಿ ವಿಮಾನಯಾನ ಸಂಸ್ಥೆಗಳು ಬೋರ್ಡಿಂಗ್ ಪಾಸ್ ನೀಡುವ ಸಂದರ್ಭದಲ್ಲಿ, ರೈಲ್ವೆ ಅಧಿಕಾರಿಗಳು ಪ್ರಯಾಣ ಸಂದರ್ಭದಲ್ಲಿ, ಬಸ್ಸುಗಳಲ್ಲಿ ನಿರ್ವಾಹಕರು ಈ ಸಂಬಂಧ ಪರಿಶೀಲನೆ ನಡೆಸುವಂತೆ ಸರ್ಕಾರ ಸೂಚಿಸಿದೆ. ರಸ್ತೆಯ ಮೂಲಕ ಪ್ರಯಾಣಿಸುವವರನ್ನು ಬೆಳಗಾವಿ, ಬೀದರ್, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಚೆಕ್ಪೋಸ್ಟ್ನಲ್ಲಿ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.