ನವದೆಹಲಿ: ರಾಷ್ಟ್ರವ್ಯಾಪಿಯಾಗಿ ನಡೆಸಲಾಗುತ್ತಿರುವ ಕೋವಿಡ್ ವಿರುದ್ಧದ ಲಸಿಕಾ ಅಭಿಯಾನದ ಅಡಿಯಲ್ಲಿ ಇದುವರೆಗೆ 33 ಕೋಟಿ 28 ಲಕ್ಷ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 96.92 ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಒಟ್ಟು ಚೇತರಿಕೆಸಂಖ್ಯೆ ಎರಡು ಕೋಟಿ 94 ಲಕ್ಷಕ್ಕೂ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 60 ಸಾವಿರಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದಾರೆ. ದೈನಂದಿನ ಚೇತರಿಕೆ ಸತತ 48 ನೇ ದಿನವೂ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ.
ಕಳೆದ 24 ಗಂಟೆಗಳಲ್ಲಿ 45 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ದೇಶದ ಸಕ್ರಿಯ ಪ್ರಕರಣ ಐದು ಲಕ್ಷ 37 ಸಾವಿರಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 1.77 ರಷ್ಟಿದೆ. ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ ಐದ ಕ್ಕಿಂತ ಕಡಿಮೆಯಿದೆ ಮತ್ತು ಇದು ಪ್ರಸ್ತುತ ಶೇಕಡಾ 2.69 ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡಾ 2.34 ರಷ್ಟಿದೆ ಮತ್ತು ಇದು ಸತತ 23 ದಿನಗಳವರೆಗೆ ಐದು ಪ್ರತಿಶತಕ್ಕಿಂತ ಕಡಿಮೆಯಿದೆ. ಒಟ್ಟಾರೆಯಾಗಿ, ಕಳೆದ 24 ಗಂಟೆಗಳಲ್ಲಿ 817 ಸಾವುಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ ಮೂರು ಲಕ್ಷ 98 ಸಾವಿರಕ್ಕೆ ತಲುಪಿದೆ. ಆರೋಗ್ಯ ಸಚಿವಾಲಯವು ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿದೆ ಮತ್ತು ಇಲ್ಲಿಯವರೆಗೆ 41 ಕೋಟಿಗೂ ಹೆಚ್ಚು ಒಂದು ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.