ವಿಜಯನಗರ: ಹಂಪಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ 500 ಕೋಟಿ ರೂ. ಗಳ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಹಂಪಿಯ ಝೂ ಸಮೀಪ 200 ಎಕರೆ ಸರ್ಕಾರಿ ಜಾಗದಲ್ಲಿ ಸುಸಜ್ಜಿತ ತ್ರಿಸ್ಟಾರ್ ಹೊಟೇಲ್ ನಿರ್ಮಿಸಲಾಗುವುದು. ಇದಕ್ಕೆ ಸುಮಾರು 18 – 20 ಕೋಟಿ ರೂ. ವೆಚ್ಚವಾಗಲಿದೆ. ವಾರದೊಳಗೆ ಶಂಕುಸ್ಥಾಪನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ವಾಹನ ನಿಲುಗಡೆಗೆ ಪಾರ್ಕಿಂಗ್, ಹೆಲಿಪ್ಯಾಡ್, ಥೀಮ್ ಪಾರ್ಕ್ ಹಾಗೂ ಒಂದು ಸಾವಿರ ವಿದ್ಯಾರ್ಥಿಗಳು ಉಳಿದುಕೊಳ್ಳಲು ಕಟ್ಟಡ ನಿರ್ಮಾಣ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕೆ ಕಡಿಮೆ ದರ ನಿಗದಿ ಮಾಡಲಾಗುತ್ತದೆ. ಹಂಪಿಯ ಐತಿಹ್ಯವನ್ನು ಯುವಜನಾಂಗಕ್ಕೆ ತಿಳಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಂಪಿಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಮೂಲ ಸೌಕರ್ಯ ವ್ಯವಸ್ಥೆ ಹೆಚ್ಚಿಸಲಾಗುವುದು. ಈ ಸಂಬಂಧ ನೀಲ ನಕಾಶೆಯ ಪರಿಷ್ಕರಣೆ ನಡೆಯುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಈ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಪ್ರವಾಸಿಗರಿಗೆ ಉಳಿದುಕೊಳ್ಳಲು ಹೋಂ ಸ್ಟೇ ವ್ಯವಸ್ಥೆ ಕಲ್ಪಿಸಲಾಗುವುದಾಗಿಯೂ ಅವರು ತಿಳಿಸಿದ್ದಾರೆ. ಹಂಪಿಯು ಕೊಪ್ಪಳ ಮತ್ತು ವಿಜಯನಗರಗಳ ನಡುವೆ ಹಂಚಿ ಹೋಗಿದ್ದು, ಎರಡೂ ಕಡೆಗಳಲ್ಲಿ ಪ್ರತ್ಯೇಕವಾಗಿ ಪ್ರಾಧಿಕಾರ ರಚಿಸಲು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಾಗೆಯೇ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದಲ್ಲಿ ರೋಪ್ ವೇ, ದ್ವಿಪಥ ರಸ್ತೆ ಸೇರಿದಂತೆ ಇನ್ನಿತರ ವಿಚಾರಗಳನ್ನು ರೂಪಿಸಲಾಗುವುದು. ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.