ಬೆಂಗಳೂರು: ಇಂದು ರಾಷ್ಟ್ರೀಯ ವೈದ್ಯರ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ವೈದ್ಯರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನ. ಆರೋಗ್ಯಕರ ಭಾರತವನ್ನು ಸೃಷ್ಟಿಸಲು ಸತತ ಪ್ರಯತ್ನ ನಡೆಸುತ್ತಿರುವ ಪ್ರತಿ ವೈದ್ಯರಿಗೂ ನಾನು ನಮಸ್ಕರಿಸುತ್ತೇನೆ. ಈ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಜೀವವನ್ನೇ ಪಣಕ್ಕಿಟ್ಟು ಜನರಿಗೆ ಸೇವೆ ಸಲ್ಲಿಸುವಲ್ಲಿದ್ದ ಅವರ ಸಮರ್ಪಣೆ, ಬದ್ಧತೆ ಮತ್ತು ಸಹಾನುಭೂತಿಗೆ ನಾವು ನಿಜವಾಗಿಯೂ ಚಿರಋಣಿಯಾಗಿದ್ದೇವೆ ಎಂದಿದ್ದಾರೆ.
ಆ ಮೂಲಕ ಕೊರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಜೀವ, ಜೀವನವನ್ನು ಪಣಕ್ಕಿಟ್ಟು ದುಡಿದ ವೈದ್ಯರಿಗೆ ಸಿಎಂ ಯಡಿಯೂರಪ್ಪ ಧನ್ಯವಾದ ಸಮರ್ಪಿಸಿದ್ದಾರೆ.
On National Doctor's Day, I salute our Doctor community for their relentless efforts to create a healthy India. We are indeed indebted to their dedication, commitment, and compassion in serving the people during this pandemic.#NationalDoctorsDay2021
— B.S.Yediyurappa (@BSYBJP) July 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.