ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳೊಳಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದಾಗಿ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಈ ನೇಮಕಾತಿಯನ್ನು ಯಾವುದೇ ಸಂದರ್ಶನಗಳನ್ನು ನಡೆಸದೆ, ಲಿಖಿತ ಪರೀಕ್ಷೆಗಳ ಮೂಲಕವೇ ಭರ್ತಿ ಮಾಡಲಾಗುತ್ತದೆ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
ಸರ್ಕಾರದ ಈ ಪ್ರಸ್ತಾವನೆಗೆ ಹಣಕಾಸು ಇಲಾಖೆಯೂ ಒಪ್ಪಿಗೆ ನೀಡಿದ್ದು, ಮುಂದಿನ ಆರು ತಿಂಗಳೊಳಗಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಈ ಪ್ರಕ್ರಿಯೆಗಳು ಪಾರದರ್ಶಕವಾಗಿರಲಿದ್ದು, ಅರ್ಹತೆಯ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.