ನವದೆಹಲಿ: ನೇರವಾಗಿ ಅಥವಾ ಪರೋಕ್ಷವಾಗಿ ನ್ಯಾಯಾಂಗವನ್ನು, ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಣ ಮಾಡುವುದು ಸಾಧ್ಯವಿಲ್ಲ. ಹೀಗೆ ಸಂಭವಿಸಿದರೆ ಕಾನೂನಿನ ನಿಯಮಗಳು ಭ್ರಮೆಯಾಗುತ್ತದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ನ್ಯಾಯಾಧೀಶರು ಒಳಗಾಗಬಾರದು. ಪ್ರಸ್ತುತ ದಿನಮಾನಗಳಲ್ಲಿ ಜನರು ಸಾಮಾಜಿಕ ಮಾಧ್ಯಮಗಳ ಪ್ರಭಾವದ ನಡುವೆ ಸರಿ, ತಪ್ಪುಗಳನ್ನು ಗುರುತಿಸುವ ಸಾಮರ್ಥ್ಯ ಕಳೆದುಕೊಳ್ಳುವಂತಾಗಿದೆ. ಅಸಲಿ ಮತ್ತು ನಕಲಿಗಳ ನಡುವಿನ ವ್ಯತ್ಯಾಸ ಅರಿಯುವುದಕ್ಕೂ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.
ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ನಿರ್ಧರಿಸುವ ಸಂದರ್ಭದಲ್ಲಿ ಮಾಧ್ಯಮಗಳು ಮಾರ್ಗದರ್ಶನ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ಸಂಸ್ಥೆಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂದು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.