ಬೆಂಗಳೂರು: ರಾಜ್ಯದ ಎಲ್ಲ ವಿವಿ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯವನ್ನು ಚುರುಕುಗೊಳಿಸಿ, ಜುಲೈ 7 ರೊಳಗೆ ಸಂಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಎಲ್ಲಾ ವಿವಿಗಳ ಕುಲಪತಿಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸೂಚಿಸಿದ್ದಾರೆ.
ಇನ್ನೆರಡು ತಿಂಗಳೊಳಗೆ ರಾಜ್ಯದ ಒಟ್ಟು ಜನಸಂಖ್ಯೆಯ 50% ಜನರಿಗೆ ಲಸಿಕೆ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ಭೌತಿಕವಾಗಿ ತರಗತಿಗಳು ಆರಂಭವಾಗುವ ಮೊದಲೇ ಲಸಿಕೆ ನೀಡಬೇಕು. ಈ ಸಂಬಂಧ ನಿತ್ಯ ಪೂರೈಕೆಯಾಗುವ ಲಸಿಖೆಯ ಬಗ್ಗೆ ಅಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸುವಂತೆಯೂ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಜೀವನಕ್ಕೆ ತೊಂದರೆಯಾಗಭಾರದು, ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಲಸಿಕೆ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಂಬುದಾಗಿಯೂ ಅವರು ಕುಲಪತಿಗಳಿಗೆ ಸೂಚಿಸಿದ್ದಾರೆ. ಲಸಿಕೀಕರಣದ ಬಳಿಕ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು. ಈಗ ನಡೆಯುತ್ತಿರುವ ಆನ್ಲೈನ್ ತರಗತಿಗಳು ಅಭಾದಿತ ಎಂದು ಅವರು ತಿಳಿಸಿದ್ದಾರೆ.
ಲಸಿಕೆ ಸಂಬಂಧಿಸಿದಂತೆ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ವೇದಿಕೆಗಳ ಮೂಲಕ ಮಾಹಿತಿ ದೊರೆಯುತ್ತಿದೆ. ಅವರ ಅನುಕೂಲಕ್ಕಾಗಿ ಹೆಲ್ಪ್ಲೈನ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.