ನವದೆಹಲಿ: ಕೆಲವು ರಾಜ್ಯಗಳು ಕೊರೋನಾ ಲಸಿಕೆ ಕೊರತೆ ಬಗ್ಗೆ ವರದಿ ಮಾಡುತ್ತಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.24 ಕೋಟಿ ಡೋಸ್ ಲಸಿಕೆ ಬಳಕೆಯಾಗದೆ ಉಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಮುಂದಿನ ವಾರ ರಾಜ್ಯಗಳಿಗೆ 94,66,420 ಡೋಸ್ ಲಸಿಕೆ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಮೂರು ದಿನಗಳಲ್ಲಿ ಈ ಲಸಿಕೆಗಳನ್ನು ಪೂರೈಕೆ ಮಾಡುವುದಾಗಿ ಹೇಳಿದೆ.
ಭಾರತ ಸರ್ಕಾರ ಈ ವರೆಗೆ ಉಚಿತ ಮತ್ತು ನೇರ ಖರೀದಿಯಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 32.92 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ ವ್ಯರ್ಥ ಸೇರಿದಂತೆ ಒಟ್ಟು ಬಳಕೆ 31,67,50,891 ಪ್ರಮಾಣದಲ್ಲಿದೆ. ಆ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.24 ಕೋಟಿ ಡೋಸ್ಗಿಂತ ಅಧಿಕ ಲಸಿಕೆಗಳು ಬಾಕಿ ಮತ್ತು ಬಳಕೆಯಾಗದೆ ಉಳಿದಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.