ನವದೆಹಲಿ: ಕೇಂದ್ರ ರಕ್ಷಣಾ ಸಚಿವಾಲಯವು ದೇಶದ ಶೌರ್ಯ ಪ್ರಶಸ್ತಿ ವಿಜೇತರ ವಿಶಿಷ್ಟ ಇಂಟರ್ಯಾಕ್ಟಿವ್ ವರ್ಚುವಲ್ ಮ್ಯೂಸಿಯಂ ಸ್ಥಾಪನೆಗೆ ಅನುಮತಿ ನೀಡಿದೆ. ವರ್ಚುವಲ್ ಮ್ಯೂಸಿಯಂ ಅನ್ನು ಗ್ಯಾಲಂಟ್ರಿ ಅವಾರ್ಡ್ಸ್ ಪೋರ್ಟಲ್ ಆಯೋಜಿಸುತ್ತದೆ.
ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿರುವ ಈ ಯೋಜನೆಯನ್ನು ಸೊಸೈಟಿ ಆಫ್ ಇಂಡಿಯನ್ ಡಿಫೆನ್ಸ್ ಮ್ಯಾನುಫ್ಯಾಕ್ಚರರ್ಸ್ (ಎಸ್ಐಡಿಎಂ) ಮತ್ತು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (ಸಿಐಐ) ಸಹಭಾಗಿತ್ವದಲ್ಲಿ ಎಂಒಡಿ ಜಾರಿಗೆ ತರಲಿದೆ.
ದೇಶದ ವೀರ ಯೋಧರಿಗೆ ಗೌರವ ಸಲ್ಲಿಸಲು ರಾಷ್ಟ್ರಕ್ಕೆ ವರ್ಚುವಲ್ ವೇದಿಕೆಯನ್ನು ಒದಗಿಸುವ ಉದ್ದೇಶವನ್ನು ಇದು ಒಳಗೊಂಡಿದೆ. ಈ ಮ್ಯೂಸಿಯಂ ಜನರಿಗೆ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಕೃತಜ್ಞತೆ ಸಲ್ಲಿಸುವ ವೇದಿಕೆಯಾಗಿಯೂ ಕಾರ್ಯನಿರ್ವಹಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಕಾರ್ಯದರ್ಶಿ ಡಾ.ಅಜಯ್ ಕುಮಾರ್, ಶೌರ್ಯ ಪ್ರಶಸ್ತಿ ವಿಜೇತರ ವೀರ ಕಾರ್ಯಗಳಿಗೆ ಜೀವ ತುಂಬುವಲ್ಲಿ ಈ ಉಪಕ್ರಮವು ಸಹಕಾರಿಯಾಗಲಿದೆ ಮತ್ತು ಆಂತರಿಕ ಮತ್ತು ಬಾಹ್ಯ ಬೆದರಿಕೆಗಳಿಂದ ರಾಷ್ಟ್ರವನ್ನು ಭದ್ರಪಡಿಸುವಲ್ಲಿ ಅವರ ಅಪಾರ ಕೊಡುಗೆ ಮತ್ತು ಅದಮ್ಯ ಮನೋಭಾವವನ್ನು ಇದು ಅಂಗೀಕರಿಸಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.