ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲನೆ ಮಾಡದ ಹೊರತು ಸಂಪೂರ್ಣ ಅನ್ಲಾಕ್ ಸಾಧ್ಯವಿಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಸದ್ಯದ ಸ್ಥಿತಿಯಲ್ಲಿ ನಗರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್ಲಾಕ್ ಕ್ರಮ ಜಾರಿಗೊಳಿಸುತ್ತಿದೆ. ಬೆಂಗಳೂರಿನಲ್ಲೂ ಸಂಪೂರ್ಣ ಅನ್ಲಾಕ್ ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ನಗರದಲ್ಲಿ ನಿತ್ಯ 700 – 800 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಅದರ ನಡುವೆಯೂ ಅನ್ಲಾಕ್ ಮಾಡುವಂತೆ ಸಾರ್ವಜನಿಕ ವಲಯದಿಂದ ಒತ್ತಡ ಬರುತ್ತಿದೆ. ಆದರೆ ಜನರು ಕೊರೋನಾ ನಿಯಮಗಳನ್ನು ಸರಿಯಾಗಿ ಪಾಲಿಸದ ಹೊರತು ಅನ್ಲಾಕ್ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ರಸ್ತೆಗಳಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್, ಸೀಟ್ಬೆಲ್ಟ್ ಹೇಗೆ ಕಡ್ಡಾಯವೋ, ಹಾಗೆಯೇ ಕೊರೋನಾ ನಿಯಂತ್ರಣ ನಿಯಮಗಳ ಪಾಲನೆಯೂ ಕಡ್ಡಾಯ ಎಂದು ತಿಳಿಸಿದ್ದಾರೆ. ಕೊರೋನಾ ಅನ್ಲಾಕ್ ಸಂಬಂಧ ಅಂತಿಮ ನಿರ್ಧಾರ ರಾಜ್ಯ ಸರ್ಕಾರದ್ದೇ ಆಗಿರುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.