ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಪುದುಚೇರಿಯ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ.
ನಡ್ಡಾ ಅವರನ್ನು ಗುರುವಾರ ಬಿಜೆಪಿ, ಪಕ್ಷೇತರ ಶಾಸಕರು, ಬಿಜೆಪಿ ಪುದುಚೇರಿ ಘಟಕದ ಅಧ್ಯಕ್ಷರನ್ನು ಒಳಗೊಂಡ ನಿಯೋಗ ಭೇಟಿ ಮಾಡಿದ್ದು, ಈ ಸಂದರ್ಭದಲ್ಲಿ ನಡ್ಡಾ ಅವರಿಗೆ ಪುದುಚೇರಿ ಅಭಿವೃದ್ಧಿಯ ಭರವಸೆಯನ್ನು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪುದುಚೇರಿಯ ಶಾಸಕರ ನೀಯೋಗವನ್ನು ಭೇಟಿಯಾದೆ. ಈ ಸಂದರ್ಭದಲ್ಲಿ ನಮ್ಮ ಪರ ಜನಾದೇಶ ನೀಡಿದ ಪುದುಚೇರಿಯ ಜನತೆಗೆ ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ. ಎನ್ಡಿಎ ಸರ್ಕಾರ ಪುದುಚೇರಿಯನ್ನು ಸರ್ವತೋಮುಖವಾಗಿ ಅಭಿವೃದ್ಧಿ ಮಾಡಲಿದೆ ಎಂದು ತಿಳಿಸಿದ್ದಾರೆ.
Met a delegation of MLAs from Puducherry today. We are grateful to the people of Puducherry for giving us such a mandate.
We assure that under the leadership of Hon’ble PM Shri @narendramodi Ji, NDA Govt. will ensure all round development of Puducherry. pic.twitter.com/hfXwQ21mJE— Jagat Prakash Nadda (@JPNadda) July 1, 2021
ನಡ್ಡಾ ಭೇಟಿಗೂ ಮುನ್ನ ಈ ಶಾಸಕರ ತಂಡ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.