ಬೆಂಗಳೂರು: ರಾಜ್ಯದಲ್ಲಿ ಅಮೆರಿಕ ಮೂಲದ ಸಿ4ವಿ ಕಂಪನಿಯು ಐದು ಲೀಥಿಯಂ ಅಯಾನ್ ಬ್ಯಾಟರಿ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ 4,015 ಕೋಟಿ ರೂಪಾಯಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿವೆ.
ಈ ಸಂಬಂಧ ಮಾಧ್ಯಮಗಳ ಜೊತೆ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಸಿ4ವಿ ಸಂಸ್ಥೆ ಲೀಥಿಯಂ ಬ್ಯಾಟರಿಗಳ ತಯಾರಿಯಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿಯೂ 5 ಘಟಕಗಳ ಆರಂಭಕ್ಕೆ ಮುಂದಾಗಿದ್ದು, ಇದರಿಂದ ಸುಮಾರು 4000 ಗಳಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಎಲೆಕ್ಟ್ರಿಕ್ ವಾಹನಗಳಿಗೆ ಬಳಸುವಂತಹ ಬ್ಯಾಟರಿ ತಯಾರಿಕಾ ಘಟಕಗಳು ಆರಂಭವಾಗುತ್ತಿವೆ. ಮುಂದಿನ ವರ್ಷದಿಂದ ಈ ಘಟಕಗಳ ಕಾಮಗಾರಿ ಆರಂಭವಾಗಲಿದೆ. ಹಾಗೆಯೇ ಬ್ಯಾಟರಿ ತಯಾರಿಕಾ ಕ್ಷೇತ್ರದ ಮತ್ತಷ್ಟು ಸಂಸ್ಥೆಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.