ಬೆಂಗಳೂರು: ರಾಜ್ಯ ಸರ್ಕಾರ ಅನ್ಲಾಕ್ 3.0 ಬಗ್ಗೆ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ, ತಜ್ಞರು ಸೋಂಕು ಹೆಚ್ಚಳವಾಗುವ ಎಚ್ಚರಿಕೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಅನ್ಲಾಕ್ ಸಂಬಂಧ ಮಹತ್ವದ ಸಭೆ ನಡೆಯಲಿದ್ದು, ಈ ಸಂಬಂಧ ತಾಂತ್ರಿಕ ಸಮಿತಿ ಎಚ್ಚರಿಕೆಯಿಂದ ಮುಂದಡಿ ಇಡುವಂತೆ ಸೂಚಿಸಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡುವುದು ಸೂಕ್ತವಲ್ಲ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಉಲ್ಬಣಗೊಂಡಿದ್ದು, ಈ ಸಮಯದಲ್ಲಿ ಕರ್ಫ್ಯೂ ತೆಗೆದಲ್ಲಿ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಇನ್ನೆರಡು ವಾರ ಕಾದು, ಪರಿಸ್ಥಿತಿ ಅವಲೋಕಿಸಿ ಬಳಿಕ ನಿರ್ಧರಿಸುವುದು ಸೂಕ್ತ ಎಂದು ಹೇಳಿದೆ.
ಕನಿಷ್ಠ ನೈಟ್ ಕರ್ಫ್ಯೂ ಆದರೂ ಮುಂದುವರಿಸುವಂತೆ ಸೂಚಿಸಿದ್ದಾರೆ. ರಾಜ್ಯಕ್ಕೆ ಹೆಚ್ಚು ಜನರು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತಷ್ಟು ಎಚ್ಚರಿಕೆ ಅಗತ್ಯ ಎಂದು ತಜ್ಞರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.