ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಈ ಹಿಂದಿದ್ದ 76605 ರಷ್ಟು ಸೋಂಕಿತರ ಪ್ರಕರಣಗಳ ಸಂಖ್ಯೆ ಸದ್ಯ 65312 ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 43798 ಪ್ರಕರಣದಿಂದ 33516 ಕ್ಕೆ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ 23.30% ಕ್ಕೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಏರಿಕೆಯಾಗಿ ಸಕ್ರಿಯ ಪ್ರಕರಣಗಳ ಇಳಿಕೆಯಾಗುತ್ತಿದ್ದರೂ, ಸಾವಿನ ಪ್ರಮಾಣ 1% ಗಿಂತಲೂ ಹೆಚ್ಚಾಗಿಯೇ ಇದೆ. ಬೆಂಗಳೂರಿನಲ್ಲಿ ಸಾವಿನ ಪ್ರಮಾಣ 11.28 ರಷ್ಟಿದ್ದು ಅದನ್ನು 1% ಗೆ ಇಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.