ನವದೆಹಲಿ: ಇಸ್ಲಾಮಾಬಾದ್ನ ಭಾರತೀಯ ಹೈಕಮಿಷನ್ ಕಾಂಪೌಂಡ್ ಒಳಗೆ ಡ್ರೋನ್ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಈ ಘಟನೆ ಕುರಿತು ಭಾರತ ಪಾಕಿಸ್ಥಾನದೊಂದಿಗೆ ವಿಷಯವನ್ನು ಪ್ರಸ್ತಾಪಿಸಿದ್ದು, ತನ್ನ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ಥಾನದ ಭಾರತೀಯ ಮಿಷನ್ ಒಳಗೆ ಡ್ರೋನ್ ಪತ್ತೆಯಾದ ಮೊದಲ ಘಟನೆ ಇದಾಗಿದೆ. ಕಾರ್ಯಕ್ರಮವೊಂದು ನಡೆಯುತ್ತಿದ್ದ ಸಂದರ್ಭದಲ್ಲಿ ಮಿಷನ್ ಒಳಗೆ ಡ್ರೋನ್ ಪತ್ತೆಯಾಗಿದೆ.
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ವಾಯುಪಡೆಯ ನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದ ಬಳಿಕ ಉದ್ಭವಿಸಿದ ಉದ್ವಿಗ್ನತೆಯ ಮಧ್ಯೆ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಸೌಲಭ್ಯದಲ್ಲಿ ಈ ಬೆಳವಣಿಗೆ ನಡೆದಿರುವುದು ಸಹಜವಾಗಿ ಆತಂಕವನ್ನು ಸೃಷ್ಟಿ ಮಾಡಿದೆ.
ನಿನ್ನೆ ಕೂಡ ಭಾರತ-ಪಾಕ್ ಗಡಿಯಲ್ಲಿ ಡ್ರೋನ್ ಕಾಣಿಸಿಕೊಂಡಿದೆ, ಯೋಧರು ಇದಕ್ಕೆ ಗುಂಡು ಹಾರಿಸಿ ಹಿಮ್ಮೆಟ್ಟಿಸಿದ್ದಾರೆ. ಪ್ರಸ್ತುತ ಪಾಕಿಸ್ಥಾನವು ಭಾರತದ ವಿರುದ್ಧ ನೇರವಾಗಿ ಹೋರಾಡಲಾಗದೆ ಡ್ರೋನ್ಗಳ ಮೂಲಕ ದಾಳಿ ನಡೆಸುವ ಯೋಜನೆ ಹಾಕಿಕೊಂಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.