ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಟಿ.ಸಿ. ಶಿವಶಂಕರಮೂರ್ತಿ ನಿಧನರಾಗಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡು ಕ್ಯಾಂಪಸ್ ಆಕರ್ಷಕಗೊಳಿಸಿದ್ದರು.
ವಿಶ್ವವಿದ್ಯಾನಿಲಯಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸುತ್ತಾ, ಶ್ರೀಯುತರ ಅಕಾಲಿಕ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ ಹಾಗೂ ಅಸಂಖ್ಯಾತ ವಿಧ್ಯಾರ್ಥಿಗಳಿಗೂ ನೀಡಲಿ ಎಂದು ಪ್ರಾರ್ಥಿಸುತ್ತಾ ಪ್ರೊ. ಶಿವಶಂಕರಮೂರ್ತಿಯವರ ಅಗಲಿಕೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಗಣೇಶ್ ಕಾರ್ಣಿಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.