ನವದೆಹಲಿ: ವಿಶ್ವದ ನಿದ್ದೆಗೆಡಿಸಿರುವ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಸಾಧನೆ ಮೆರೆದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, 34 ಕೋಟಿ ಡೋಸ್ ಲಸಿಕೆ ವಿತರಣೆ ಮಾಡುವ ಮೂಲಕ ಭಾರತ ದಾಖಲೆ ಮಾಡಿದೆ. ಶುಕ್ರವಾರ ಬೆಳಗ್ಗಿನ ವರೆಗೆ ದೇಶಾದ್ಯಂತ ಒಟ್ಟು 34,00,76,232 ಡೋಸ್ ಲಸಿಕೆ ನೀಡಿರುವುದಾಗಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 42 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಇದರಲ್ಲಿ 32,80,998 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 9,83,125 ಫಲಾನುಭವಿಗಳಿಗೆ 2 ನೇ ಡೋಸ್ ಲಸಿಕೆ ನೀಡಲಾಗಿದೆ. ಹಾಗೆಯೇ ಗುರುವಾರ 18 – 44 ವರ್ಷದೊಳಗಿನ 24,51,539 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 89,027 ಫಲಾನುಭವಿಗಳಿಗೆ ಎರಡನೇ ಡೋಸ್ ನೀಡಲಾಗಿದೆ.
ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳು 18 – 44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಕೊರೋನಾ ಲಸಿಕೆಯನ್ನು ನೀಡಿವೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.