ಬೆಂಗಳೂರು: ಎಸ್ಸಿಎಸ್ಪಿ, ಟಿಎಸ್ಪಿ ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ಬಳಕೆಯ ಪ್ರಸ್ತಾಪಗಳುಳ್ಳ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಅನುಮೋದನೆ ನೀಡಿದೆ.
ಎಸ್ಸಿಎಸ್ಪಿ, ಟಿಎಸ್ಪಿ ಅಡಿಯಲ್ಲಿ 35 ಇಲಾಖೆಗಳಿಗೆ ಈ ಅನುದಾನ ಹಂಚಿಕೆ ಮಾಡಲಾಗಿದೆ. ಇದರ ಬಳಕೆಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳೂ ಕ್ರಿಯಾಯೋಜನೆ ಸಲ್ಲಿಸಿದ್ದವು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪರಿಷತ್ನ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆತಿದೆ.
ಈ ಸಂಬಂಧ ಮಾಧ್ಯಮಗಳ ಜೊತೆಗೆ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ಪ್ರಸಕ್ತ ವರ್ಷ ಎಸ್ಸಿಎಸ್ಪಿ, ಟಿಎಸ್ಪಿ ಅಡಿಯಲ್ಲಿ 26,005.01 ಕೋಟಿ ವೆಚ್ಚ ಮಾಡಲಾಗುತ್ತದೆ. ಎಸ್ಸಿಎಸ್ಪಿ ಅಡಿಯಲ್ಲಿ 18,331.54 ಕೋಟಿ ಮತ್ತು ಟಿಎಸ್ಪಿ ಅಡಿಯಲ್ಲಿ7673. 47 ಕೋಟಿ ರೂ. ವೆಚ್ಚ ಮಾಡುವ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೊದಲ ಕಂತಿನ ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಕಾರ್ಯಕ್ರಮಗಳ ಅನುಷ್ಠಾನವನ್ನು ಶೀಘ್ರದಲ್ಲೇ ಮಾಡಲಾಗುತ್ತದೆ. ಇದಕ್ಕೆ ಅಗತ್ಯವಾದ ಸರ್ಕಾರಿ ಆದೇಶಗಳನ್ನು ಹೊರಡಿಸಿ ತಕ್ಷಣ ಈ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ ಕಳೆದ ವರ್ಷ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಯಾವುದೇ ಅನುದಾನ ಬಾಕಿ ಉಳಿಸಿಲ್ಲ. ಅನ್ಯ ಉದ್ದೇಶಕ್ಕಾಗಿ ಬಳಸಿಲ್ಲ. ಪರಿಶಿಷ್ಟ ಜಾತಿ / ಪಂಗಡದ ಅಭಿವೃದ್ಧಿಗೆ ಸರ್ಕಾರ ಕಂಕಣಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.