ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎರಡು ದಿನಗಳ ಕರ್ನಾಟಕ ಪ್ರವಾಸವನ್ನು ಮುಗಿಸಿದ್ದಾರೆ.
ಈ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿ ಅವರು, ಕೊರೋನಾ, ಆಸ್ಪತ್ರೆಗಳ ಮೂಲಸೌಕರ್ಯ, ವ್ಯಾಕ್ಸಿನೇಶನ್ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಬಯೋಟೆಕ್ ವಲಯದ ಉದ್ಯಮಿಗಳ ಜೊತೆಗೂ ಅವರು ಈ ಭೇಟಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಹಾಗೆಯೇ ಅವರು ಜಯನಗರದಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ನವಜಾತ ಮಕ್ಕಳ ವಿಭಾಗ, ಮಕ್ಕಳ ಐಸಿಯು ಸ್ಥಾಪಿಸಲು ಅನುಮೋದನೆಯನ್ನು ಸಹ ಈ ಸಂದರ್ಭದಲ್ಲಿ ಪಡೆಯಲಾಗಿದೆ. ಆಸ್ಪತ್ರೆಯಲ್ಲಿ 20 ಹಾಸಿಗೆಗಳ ಮಕ್ಕಳ ಐಸಿಯು ಸ್ಥಾಪನೆ, ಮೂಲಸೌಕರ್ಯಗಳನ್ನು ಒದಗಿಸುವುದು, ನವೀಕರಿಸುವುದು, ವೈದ್ಯಕೀಯ ಆಮ್ಲಜನಕ ಸೌಲಭ್ಯಗಳನ್ನು ಒದಗಿಸುವ ಮತ್ತು ವಿದ್ಯುತ್ ಮೂಲಸೌಕರ್ಯ ನವೀಕರಣ ಮೊದಲಾದವುಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈ ಅನುಮೋದನೆ ಪಡೆಯಲಾಗಿದೆ.
ಹಾಗೆಯೇ ಯಲಹಂಕದಲ್ಲಿನ ಕರ್ನಾಟಕ ಪವರ್ ಕಾರ್ಪೊರೇಷನ್ ಲಿ. ಆವರಣದಲ್ಲಿನ ನಿರ್ಮಿಸಿರುವ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಜಯನಗರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ.
.@Boeing_In ಸಂಸ್ಥೆಯು @SELCOFoundation ಮತ್ತು @DFYIndia ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ @nsitharaman ಅವರು ಇಂದು ಭೇಟಿ ನೀಡಿದರು. ಅತ್ಯಲ್ಪ ಅವಧಿಯಲ್ಲಿ ನಿರ್ಮಿಸಿರುವ ಈ ಆಸ್ಪತ್ರೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ. pic.twitter.com/MhierCuASL
— Dr Sudhakar K (@DrSudhakar_) July 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.