ಬೆಂಗಳೂರು: ಜೀವ ವೈವಿಧ್ಯ ಮಂಡಳಿಯ 45 ದಿನಗಳ ಕಾಲ ರಾಜ್ಯಾದ್ಯಂತ ನಡೆಯಲಿರುವ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ರಾಜ್ಯದ ಕೆರೆ, ನದಿ, ಕಣಿವೆಗಳು, ನಿಸರ್ಗ ಸಂಪತ್ತು ರಕ್ಷಣೆಗೆ ಸ್ಥಳೀಯರೇ ಮುಂದಾಗಬೇಕು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನವನ್ನು ಈ ಅಭಿಯಾನದ ಮೂಲಕ ಜೀವ ವೈವಿಧ್ಯ ಮಂಡಳಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ಈ ಅಭಿಯಾನವನ್ನು ಆಗಸ್ಟ್ 15 ರ ವರೆಗೆ ರಾಜ್ಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ. ಪಂಚಾಯತ್ ಮಟ್ಟದಲ್ಲಿ, ನಗರ ಸಂಸ್ಥೆಗಳಲ್ಲಿ ರಚಿಸಲಾಗುವ ಜೀವ ವೈವಿಧ್ಯ ಸಮಿತಿಯನ್ನು ಸಕ್ರಿಯಗೊಳಿಸುವುದು, ನಿಸರ್ಗ ಸಂಪತ್ತಿನ ಅವಲೋಕನ, ಕೆರೆಗಳ ಪುನಶ್ಚೇತನ, ವನಗಳ ಪುನಶ್ಚೇತನ ಮೊದಲಾದ ಆಶಯಗಳನ್ನು ಇರಿಸಿಕೊಂಡು ಈ ಅಭಿಯಾನ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.